Kannada NewsKarnataka NewsLatestPolitics
*ಅವರು ತಂದುಕೊಟ್ಟಿರುವ ಹಣವನ್ನೇ ನಾವು ಬಿಹಾರಕ್ಕೆ ಕಳುಹಿಸಿಕೊಟ್ಟಿದ್ದೇವೆ: ಶ್ರೀರಾಮುಲುಗೆ ಡಿಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಬಿಹಾರ ಚುನಾವಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 300 ಕೋಟಿ ಕಲೆಕ್ಷನ್ ಮಾಡಿ ಕಳುಹಿಸಿದ್ದಾರೆ ಎಂಬ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ಕೊಟ್ಟಿದ್ದಾರೆ. ಅದೇ ಹಣವನ್ನೇ ನಾವು ಬಿಹಾರಕ್ಕೆ ಕಳುಹಿಸಿಕೊಟ್ಟಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.
ಶ್ರೀರಾಮುಲು ನಮಗೆ ಹಣ ಕೊಟ್ಟಿದ್ದರು. ಆ ಫಂಡ್ ನ್ನು ನಾವು ಚುನಾವಣೆಗೆ ಕಳಿಹಿಸಿಕೊಟ್ಟಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.



