Belagavi NewsBelgaum NewsPolitics
*ಕಿಡ್ನ್ಯಾಪ್ ಅಗಿದ್ದ ಕಿತ್ತೂರು ಪಟ್ಟಣ ಪಂಚಾಯ್ತಿ ಸದಸ್ಯ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯನನ್ನು ಪತ್ತೆಹಚ್ಚುವಲ್ಲಿ ಪೊಲಿಸರು ಯಶಸ್ವಿಯಾಗಿದ್ದಾರೆ.
ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಸದ್ಯ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಕೋರ್ಟ್ ನಲ್ಲಿ ಹೇಳಿಕೆ ಪಡೆದು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಚನ್ನಮ್ಮ ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಕೆಲದಿನಗಳಿಂದ ನಾಪತ್ತೆಯಾಗಿದ್ದರು. ನಾಗರಾಜ್ ತಂದೆ ಕಿಡ್ನ್ಯಾಪ್ ಕೇಸ್ ದಾಖಲಿಸಿದ್ದರು. ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನವರೇ ತಮ್ಮ ಸದಸ್ಯನನ್ನು ಅಪಹರಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಇದೀಗ ನಾಗರಾಜ್ ಅಸುಂಡಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


