Kannada NewsKarnataka NewsLatestPolitics

*ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಕೊಠಡಿ ಹಂಚಿಕೆ: ರಾಮಲಿಂಗಾರೆಡ್ಡಿಗೆ ಭರ್ಜರಿ ಕೊಡುಗೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಪುಟದ ಮೊದಲ ಹಂತದ ನೂತನ 13 ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಚಿವರಿಗೆ ಕೊಠಡಿ ಹಂಚಿಕೆ ಮಾಡಿ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಇದಲ್ಲಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿಲ್ಲವೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರಿಗೆ ಬರೋಬ್ಬರಿ ನಾಲ್ಕು ಕೊಠಡಿಗಳನ್ನು ನೀಡಲಾಗಿದೆ. ರಾಮಲಿಂಗಾರೆಡ್ಡಿಗೆ 335, 336, 337, 337A ಕೊಠಡಿಗಳ ಹಂಚಿಕೆ ಮಾಡಲಾಗಿದೆ.

ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿಗೆ 335, 336, 337, 337A ಒಟ್ಟು 4 ಕೊಠಡಿಗಳ ಹಂಚಿಕೆ ಮಾಡಲಾಗಿದೆ. ಈ ಹಿಂದೆ ಡಿಸಿಎಂ ಆಗಿದ್ದಾಗ ಡಿ‌.ಕೆ.ಶಿವಕುಮಾರ್ ಬಳಸುತ್ತಿದ್ದ ಕಚೇರಿ ಸಿಎಂ ಕಚೇರಿಯಂತೆ ನವೀಕರಣ ಮಾಡಿಸಿದ್ದರು. ಈಗ ಅದೇ ಕೊಠಡಿಗಳನ್ನು ಸಚಿವ ರಾಮಲಿಂಗಾರೆಡ್ಡಿಗೆ ಬಿಟ್ಟುಕೊಟ್ಟಿದ್ದಾರೆ.

ಪರಮೇಶ್ವರ್ ಉಪ ಮುಖ್ಯಮಂತ್ರಿ (ಕಂದಾಯ ಮತ್ತು ಯುವಸಬಲೀಕರಣ) – ವಿಧಾನಸೌಧ 327/327a
ಕೆ.ಎಚ್ ಮುನಿಯಪ್ಪ, (ಆಹಾರ ಸಚಿವ)- ವಿಧಾನಸೌಧ – 340a/341/341a
ಕೆಜೆ ಜಾರ್ಜ್ (ಇಂಧನ ಮತ್ತು ಪ್ರವಾಸೋದ್ಯುಮ) – ವಿಧಾನಸೌಧ, 317/317a
ಎಂಬಿ ಪಾಟೀಲ್, (ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ) – ವಿಧಾನಸೌಧ – 344/344a
ರಾಮಲಿಂಗಾರೆಡ್ಡಿ, (ಜಲಸಂಪನ್ಮೂಲ ಸಚಿವ) – ವಿಧಾನಸೌಧ, 335/336/337/337a
ಸತೀಶ್ ಜಾರಕಿಹೊಳಿ, (ಲೋಕೋಪಯೋಗಿ ಸಚಿವ) – ವಿಕಾಸಸೌಧ, 444/445
ಕೃಷ್ಣ ಬೈರೇಗೌಡ, ಸಚಿವ -(ಬೆಂಗಳೂರು ನಗರಾಭಿವೃದ್ಧಿ ಸಚಿವ) ವಿಕಾಸಸೌಧ, 244/245
ಪ್ರಿಯಾಂಕ್ ಖರ್ಗೆ, (ಗೃಹ ಇಲಾಖೆ ಮತ್ತು ಐಟಿಬಿಟಿ) – ವಿಕಾಸ ಸೌಧ, 242, 243
ಯುಟಿ ಖಾದರ್, (ಆರೋಗ್ಯ ಸಚಿವ) – ವಿಧಾನಸೌಧ, 315/315a
ಈಶ್ವರ್ ಖಂಡ್ರೆ, (ಗ್ರಾಮೀಣಾಭಿವೃದ್ಧಿ ಸಚಿವ) – ವಿಕಾಸಸೌಧ, 36/37
ಯತೀಂದ್ರ ಸಿದ್ದರಾಮಯ್ಯ, (ನಗರಾಭಿವೃದ್ಧಿ ಸಚಿವ) – ವಿಧಾನಸೌಧ, 314/314a
ಶರಣಪ್ರಕಾಶ್ ಪಾಟೀಲ್, (ವೈದ್ಯಕೀಯ ಶಿಕ್ಷಣ ಸಚಿವ) – ವಿಕಾಸಸೌಧ. 344/345
ಬೈರತಿ ಸುರೇಶ್, (ಸಾರಿಗೆ ಸಚಿವ) – ವಿಧಾನಸೌಧ, 316/316a

ಕುಮಾರಕೃಪಾ ಅತಿಥಿ ಗೃಹ ಇನ್ಮುಂದೆ ಮುಖ್ಯಮಂತ್ರಿಗಳ ಗೃಹ ಕಚೇರಿಯಾಗಲಿದೆ. ಸದ್ಯ ಮುಖ್ಯ ದ್ವಾರ ಪೂರ್ವ ಭಾಗದಲ್ಲಿದ್ದು, ಪೂರ್ವ ಭಾಗದ ದ್ವಾರದಲ್ಲೇ ಎಲ್ಲರ ಓಡಾಟ ಇತ್ತು. ಆದ್ರೆ, ಪೂರ್ವ ಭಾಗದಲ್ಲಿರುವ ಕಚೇರಿಯ ಮುಖ್ಯ ದ್ವಾರವನ್ನು ಬದಲಾವಣೆ ಮಾಡಲಾಗಿದ್ದು, ಸಿಎಂ ಡಿಕೆ ಶಿವಕುಮಾರ್ ತಮ್ಮ ಗೃಹ ಕಚೇರಿಗೂ ಉತ್ತರ ಬಾಗಿಲಿನಿಂದಲೇ ಪ್ರವೇಶ ದ್ವಾರ ಮಾಡಿಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button