Kannada NewsKarnataka NewsLatest

* 5 ಹುಲಿಗಳು ಸಾವು ಪ್ರಕರಣ: ಇಬ್ಬರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಸ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

Home add -Advt

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ಅರಣ್ಯದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಮೃತದೇಹ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶ ನೀಡಿದ್ದರು. ಮೂರು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಇನ್ನು ಐದು ಹುಲಿಗಳು ಸಾವನ್ನಪ್ಪಿದ್ದ ಸ್ಥಳದ ಕೆಲವೇ ದೂರದಲ್ಲಿ ಹಸುವಿನ ಕಳೇಬರಹ ಕೂಡ ಪತ್ತೆಯಾಗಿದೆ. ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಇನ್ನು ಹುಲಿಗಳ ಅಸಹಜ ಸಾವಿನ ಬಗ್ಗೆ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ವಿದ್ಯುತ್ ಸ್ಪರ್ಶ, ವಿಸ್ಷಪ್ರಾಶನದಿಂದ ಮೃತಪಟ್ಟರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದ್ದಾರೆ.

Related Articles

Back to top button