
ಪ್ರಗತಿವಾಹಿನಿ ಸುದ್ದಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಹೊಸ ಜವಾಬ್ದಾರಿಯನ್ನು ನೀಡಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಅಸ್ಸಾಂ ರಾಜ್ಯಕ್ಕೆ ಹಿರಿಯ ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ. ಇದೇ ವೇಳೆ ಕೇರಳಕ್ಕೆ ಸಚಿವ ಕೆ.ಜೆಜಾರ್ಜ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ.
ಅಸ್ಸಾಂ, ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಎಐಸಿಸಿ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.





