
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಶಿರಡಿ ಪ್ರವಾಸ ಕೈಗೊಂಡಿದ್ದು, ಈ ಬಗ್ಗೆ ಅವರೇ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ನಾನು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿರಡಿ ಮತ್ತಿತರ ಕಡೆ ಭೇಟಿ ನೀಡಿದ್ದೇನೆ. ಆದರೆ ಕೆಲವು ಟಿವಿ ಚಾನೆಲ್ ಮತ್ತಿತರ ಮಾಧ್ಯಮಗಳಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ದಿಲ್ಲಿಗೆ ತೆರಳಿದ್ದೇನೆ ಎಂದು ವರದಿ ಆಗಿರುವುದು ಸಂಪೂರ್ಣ ಸತ್ಯಕ್ಕೆ ದೂರವಾದ ವಿಚಾರ ಎಂದು ತಿಳಿಸಿದ್ದಾರೆ.
ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದು ಸಲ್ಲದು ಎಂದು ಡಿಸಿಎಂ ಖಡಕ್ ಆಗಿ ತಿಳಿಸಿದ್ದಾರೆ.