Karnataka NewsLatestPolitics

*ನಾಳೆ ದೆಹಲಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ನದಿ ನೀರು ವಿವಾದ ಕುರಿತು ಸುಪ್ರೀಂ ಕೋರ್ಟ್ ವಕೀಲರ ಜೊತೆ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಸಿಎಂ ಡಿ.ಕೆ. ಶಿವಕುಮಾರ್ ಅವರು ನಾಳೆ ಗುರುವಾರ (ಆ.27) ದೆಹಲಿಗೆ ಭೇಟಿ ನೀಡಲಿದ್ದಾರೆ. ಅವರ ಅಧಿಕೃತ ಪ್ರವಾಸ ಕಾರ್ಯಕ್ರಮ ಬಿಡುಗಡೆಯಾಗಿದೆ.

ಈ ಕುರಿತು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಬಿ.ಎಸ್. ಶ್ರೀಧರ್ ಅವರು ಅಧಿಕೃತ ಪ್ರವಾಸ ಕಾರ್ಯಕ್ರಮವನ್ನು ಬಿಡುಗಡೆ ಮಾಡಿದ್ದಾರೆ.

ನಾಳಿನ ಪ್ರವಾಸ ವಿವರ:

  • ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ (AI 2654)
  • ಬೆಳಗ್ಗೆ 9:55ಕ್ಕೆ ದೆಹಲಿ ತಲುಪಲಿದ್ದಾರೆ
  • ಬೆಳಗ್ಗೆ 10:30ಕ್ಕೆ ಕೇಂದ್ರ ಸಚಿವರ ಭೇಟಿ
  • ಮಧ್ಯಾಹ್ನ 2:30ಕ್ಕೆ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಕೀಲರ ಜೊತೆ ಸಭೆ
  • ಸಂಜೆ 7:30ಕ್ಕೆ ದೆಹಲಿಯಿಂದ ಬೆಂಗಳೂರಿಗೆ ವಾಪಸ್ (AI 2809)
  • ರಾತ್ರಿ 10:20ಕ್ಕೆ ಬೆಂಗಳೂರಿಗೆ ಆಗಮನ

ಈ ವೇಳೆ ಕರ್ನಾಟಕ ಭವನದ ಅಧಿಕಾರಿಗಳಿಗೆ ಮತ್ತು ದೆಹಲಿ ಪೊಲೀಸರಿಗೆ ಅಗತ್ಯ ಭದ್ರತೆ ಮತ್ತು ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಸಿಎಂ ಜೊತೆ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್. ಶ್ರೀಧರ್ ಅವರು ಇರಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button