
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ ಕಡೆ ಚುನಾವಣೆ ಆಯೋಗದಿಂದಲೇ ಮತ ಅಕ್ರಮ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆದ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಬಿಡಿಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ್, ಎಂಎಲ್ಸಿ ಬಸನಗೌಡ ಬಾದರ್ಲಿ ನಿಯೋಗದಲ್ಲಿ ಇದ್ದರು.