
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಹೆಗ್ಡೆ ಅವರ ಪುತ್ರ ಅಮರ್ಥ್ಯ ಹೆಗ್ಡೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಸೆರಟಾನ ಹೋಟೆಲ್ ನಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭದಲ್ಲಿ ನವಜೋಡಿಗಳು ಕುಟುಂಬದವರ, ಗುರುಹಿರಿಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಪ್ರೇಮಿಗಳ ದಿನದಂದೇ ಹಸೆಮಣೆಗೇರಿದ್ದು ವಿಶೇಷವಾಗಿತ್ತು.
ವಿವಾಹ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ ಸಿಂಗ್, ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ರಾಜಕೀಯ ಮುಖಂಡರು, ವಿವಿಧ ಮಠಾಧೀಶರು ಪಾಲ್ಗೊಂಡು ನವ ವಧು-ವರರಿಗೆ ಶುಭ ಹಾರೈಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ