Latest

ಡಿಕೆಶಿ ಪುತ್ರಿ ಐಶ್ವರ್ಯ ಹಾಗೂ ಅಮರ್ಥ್ಯ ಸಿದ್ದಾರ್ಥ್ ನಿಶ್ಚಿತಾರ್ಥ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಮಾಜಿ ಸಿಎಂ ಎಸ್.ಎಂ ಕೃಷ್ಣ ಮೊಮ್ಮಗ ಮತ್ತು ಕೆಫೆ ಕಾಫಿ ಡೇ ಮಾಲೀಕ ದಿ.ಸಿದ್ದಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆ ಅವರ ನಿಶ್ಚಿತಾರ್ಥ ಸಮಾರಂಭ ಇಂದು ಸರಳವಾಗಿ ನೆರವೇರಿತು.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ತಾಜ್ ಹೋಟೇಲ್ ನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದ್ದು, ಡಿಕೆಶಿ ಕುಟುಂಬ ಹಾಗೂ ಎಸ್.ಎಂ ಕೃಷ್ಣ ಕುಟುಂಬ ಸದಸ್ಯರು ಮಾತ್ರ ಭಾಗಿಯಾಗಿದ್ದರು.

ಕೋವಿಡ್ ಹಿನ್ನೆಲೆಯಲ್ಲಿ 250 ಜನರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ನಿಶ್ಚಿತಾರ್ಥ ಸಮಾರಂಭದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ ಮೊದಲಾದವರು ಭಾಗಿಯಾಗಿ ಹೊಸ ಜೋಡಿಗೆ ಶುಭಕೋರಿದರು.

Home add -Advt

Related Articles

Back to top button