Karnataka NewsLatest

*ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ*

ಇಬ್ಬರು ಸಿಬ್ಬಂದಿಗಳಿಗೆ ಗಾಯ

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಟಿಎಂ ಹೊಸೂರು ಬಳಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಾವಲು ವಾಹನ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಬೆಂಗಾವಲು ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗಳು ಸಣ್ಣಪುಟ್ಟ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button