
ಪ್ರಗತಿವಾಹಿನಿ ಸುದ್ದಿ: ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮೂರು ದಿನಗಳ ಕಾಲ ತಾವು ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ತಾವೂ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.