Kannada NewsKarnataka NewsPolitics

*ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು” ಎಂದು ಆರೋಪಿಸಿದರು.

Home add -Advt

Related Articles

Back to top button