
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ವಿಧಾನಸಭಾ ಚುನಾವಣೆ ಮುಗಿದ ಬಳಿಕ ಬಿಜೆಪಿ ಕಾರ್ಯಚಟುವಟಿಕೆಯಿಂದಲೇ ದೂರ ಉಳಿದಿರುವ ಇಬ್ಬರೂ ಶಾಸಕರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎನ್ನಲಾಗಿತ್ತು. ಅಲ್ಲದೇ ರಾಜ್ಯ ಸಭಾ ಚುನಾವಣೆಯಲ್ಲಿಯೂ ಶಾಸಕ ಸೋಮಶೇಖರ್ ಅಡ್ಡಮತದಾನ ಮಾಡುವ ಮೂಲಕ ಪಕ್ಷದ ವಿರುದ್ಧ ಸಿಡಿದೆದ್ದಿದ್ದರು. ಲೋಕಸಭಾ ಚುನಾವಣೆ ವೇಳೆಯೂ ಇಬ್ಬರು ನಾಯಕರು ಬಿಜೆಪಿ ಪರ ಪ್ರಚಾರ ಕಾರ್ಯದಲ್ಲಿ ತೊಡಗದೇ ತಟಸ್ಥರಾಗಿದ್ದರು.
ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರ ನಿವಾಸಕ್ಕೆ ಆಗಮಿಸಿದ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ.ಸೋಮಶೇಖರ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೆ ಕಾಲ ಚರ್ಚೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ