Belagavi NewsBelgaum NewsKarnataka NewsPolitics

*ಸಿಎಂ ನೇತೃತ್ವದಲ್ಲಿ ನಡೆದ ರೈತ ಮುಖಂಡರ ಸಭೆ ವಿಫಲ*: *ಕಬ್ಬು ಬೆಳೆಗಾರರ ಮುಂದಿನ ನಡೆ ಏನು?*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಹಾಗೂ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆ ಯಾವುದೇ ಸ್ಪಷ್ಟ ತೀರ್ಮಾನಕ್ಕೆ ಬಾರದೆ ವಿಫಲಗೊಂಡಿದೆ.

ಸೋಮವಾರ ನಡೆದ ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಸುಮಾರು ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಲಾಯಿತು. ಆದರೆ, ರೈತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಬೇಡಿಕೆಗಳ ಕುರಿತು ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಪದೇಪದೇ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕಾಲಾವಕಾಶ ನೀಡಲು ರೈತರು ಒಪ್ಪುತ್ತಿಲ್ಲ.

ಒಟ್ಟಾರೆ ಕಬ್ಬಿನ ದರ ನಿಗದಿ ಕುರಿತು ಮಹತ್ವದ ನಿರ್ಧಾರ ಹೊರಬೀಳಲಿದೆ ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಸಭೆಯಿಂದ ನಿರಾಶೆ ಎದುರಾಗಿದೆ. ಸಿಎಂ ಜೊತೆಗಿನ ಸಭೆ ವಿಫಲ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರು ಸರ್ಕಾರಕ್ಕೆ ಕಾಲಾವಕಾಶ ನೀಡಲಿದ್ದಾರೆಯೇ? ಅಥವಾ ಇನ್ನಷ್ಟು ಹೋರಾಟ ತೀವ್ರಗೊಳಿಸಲಿದ್ದಾರೆಯೇ? ಎಂಬುದನ್ನು ಕಾದುನೋಡಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button