
ಚರ್ಚಿಸಿದ ವಿಷಯಗಳೇನು?
ಪ್ರಗತಿವಾಹಿನಿ ಸುದ್ದಿ: “ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.
ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, “ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕರೆಸಿ ನವದೆಹಲಿಯಲ್ಲಿ ಸಭೆ ಮಾಡಲಾಗಿದೆ. ಆಮೂಲಕ ಕಾಂಗ್ರೆಸ್ ಕಚೇರಿ ನಿರ್ಮಾಣದಿಂದ, ಪಕ್ಷ ಸಂಘಟನೆವರೆಗೂ ಎಲ್ಲಾ ಜವಾಬ್ದಾರಿಯನ್ನು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರು ಇಲ್ಲದಿರುವ ಕ್ಷೇತ್ರಗಳ ಜವಾಬ್ದಾರಿಯನ್ನು ಒಬ್ಬೊಬ್ಬ ಶಾಸಕರಿಗೆ ನೀಡಲಾಗಿದೆ” ಎಂದು ವಿವರಿಸಿದರು.
“ಸಂಘಟನೆ ಕುರಿತು ಮಾರ್ಗದರ್ಶನ ನೀಡಲು ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸಿದ್ದು, ಅವರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಕೆಲವು ಶಾಸಕರ ಹೇಳಿಕೆಗಳ ಮಧ್ಯೆ ಪಕ್ಷದಲ್ಲಿ ಶಿಸ್ತು ತರಲು ಪ್ರಯತ್ನಿಸುತ್ತಿದ್ದಾರೆ. ಇದರ ಹೊರತಾಗಿ ನಾಯಕತ್ವ ಬದಲಾವಣೆ, ಸಚಿವಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ಇಲ್ಲ. ನಾವುಗಳು ಯಾರೂ ಈಗ ಆತುರದಲ್ಲಿ ಇಲ್ಲ. ನಮಗೆ 2028 ಬಹಳ ಮುಖ್ಯ. ಅದೇ ಮುಖ್ಯ” ಎಂದು ಸ್ಪಷ್ಟಪಡಿಸಿದರು.
ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡುವೆ
ಇಕ್ಬಾಲ್ ಹುಸೇನ್ ನೀವು ಸಿಎಂ ಆಗುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ನಾನೇ ನೋಟೀಸ್ ನೀಡುತ್ತೇನೆ. ನಾನು ಸಿಎಂ ಆಗುತ್ತೇನೆ ಎಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಇಕ್ಬಾಲ್ ಹುಸೇನ್, ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಲಿ, ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಯಾರೂ ಮಾತನಾಡಬಾರದು. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರಿದ್ದು, ನಾವೆಲ್ಲರೂ ಅವರ ಕೈ ಬಲಪಡಿಸಬೇಕು” ಎಂದು ತಿಳಿಸಿದರು.
ಅಭಿವೃದ್ಧಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ 1 ಲಕ್ಷ ಕೋಟಿ ಅನುದಾನ
ಬಿ.ಆರ್ ಪಾಟೀಲ್ ಅವರು ಅನುದಾನ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ, “ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿಯೇ 1 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿದೆ. 54 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ, 19 ಸಾವಿರ ಕೋಟಿ ರೈತರಿಗೆ ವಿದ್ಯುತ್ ನೀಡಲು ವ್ಯಯಿಸಲಾಗುತ್ತಿದೆ. ಸಾಮಾಜಿಕ ಕಲ್ಯಾಣ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದು ಜನರು ಹಾಗೂ ಕ್ಶೇತ್ರದ ಅಭಿವೃದ್ಧಿಗಳಿಗೆ ಅಲ್ಲವೇ? ನಮ್ಮ ರಾಜ್ಯದಲ್ಲಿ ಆಗುತ್ತಿರುವ ಕಲ್ಯಾಣ ಯೋಜನೆಗಳು ಬೇರೆ ಯಾವುದೇ ರಾಜ್ಯದಲ್ಲಿ ಆಗುತ್ತಿಲ್ಲ” ಎಂದು ತಿಳಿಸಿದರು.
ಮಾಲೂರು ಶಾಸಕರಾದ ನಂಜೇಗೌಡರಿಗೆ ನೀವು ಕೆಎಂಎಫ್ ಸ್ಥಾನ ಕೊಡಿಸುವುದಾಗಿ ಹೇಳಿದ್ದೀರಿ ಎಂದು ಸ್ವತಃ ಶಾಸಕರೇ ಹೇಳಿದ್ದಾರೆ ಎಂದು ಕೇಳಿದಾಗ, “ರಾಜಕೀಯ ಬೆಳವಣಿಗೆಗಳೇ ಬೇರೆ, ಸಹಕಾರ ಕ್ಷೇತ್ರವೇ ಬೇರೆ. ಅದರ ಬಗ್ಗೆ ಈಗ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.
AICC General Secretary’s meeting with MLAs is not about leadership change: DCM DK Shivakumar
Bengaluru, July 1: KPCC President and Deputy Chief Minister DK Shivakumar today clarified that the meeting between MLAs and AICC General Secretary Randeep Singh Surjewala was about party organisation and not about leadership change.
Speaking to reporters at the KPCC office, he said, “The meeting is to discuss party organisation and receive MLA’s pleas. There has been no discussion about change of CM or expansion of the Cabinet. The Congress party has changed the district and block level leaders across the country and this meeting is in that backdrop.”
“AICC President has declared this year as the year of organisation and has asked us to empower district party presidents. Rahul Gandhi and AICC General Secretaries held a meeting of district presidents in Delhi,” he added.
“Randeep Singh Surjewala is here to receive pleas from MLAs and also give guidance on party organisation. He is trying to bring in discipline in the party amidst public statements by some of the MLAs. Neither the Cabinet expansion or the leadership change was discussed. We are not in a hurry for that and our only focus is 2028,” he said.
Notice to Iqbal Hussain
Asked about Iqbal Hussain’s statement that DK Shivakumar would become the CM, he said, “I will serve him a notice. No one should make public statements on this. Siddaramaiah is the CM and we all should strengthen his hand.”
Rs 1 lakh crore for development in the budget
Asked about B R Patil expressing dissatisfaction over grants, he said, “The state budget has allocated Rs 1 lakh crore for development. Rs 54,000 crore is ear-marked for guarantee schemes. Rs 19,000 crore is spent on providing electricity to farmers. Isn’t this development?”
Asked about Malur MLA Nanjegowda’s statement that he was promised to be made accommodated in KMF, he said, “Political developments are different and cooperative sector is different. I will not comment on that now.”