Karnataka NewsLatestPolitics

*ಮಾಧ್ಯಮಗಳ ಆಶಿರ್ವಾದ ಕೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಮತ್ತು ಜೆಡಿಎಸ್‌ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

Home add -Advt

ಕೃಷ್ಣನ ಆಶೀರ್ವಾದ ಪಡೆಯಲು ಬಂದಿದ್ದೀರಿ ಎಂದು ಕೇಳಿದಾಗ, “ಕೃಷ್ಣ, ಗಣಪತಿ ಹಾಗೂ ನಿಮ್ಮ (ಮಾಧ್ಯಮಗಳ) ಆಶೀರ್ವಾದ ಪಡೆಯಲು ಬಂದಿದ್ದೇನೆ. ನಿಮ್ಮದು ಸೇರಿದಂತೆ ಎಲ್ಲರ ಆಶೀರ್ವಾದ ಬೇಕು” ಎಂದು ಚಟಾಕಿ ಹಾರಿಸಿದರು.

ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಚರ್ಚೆಯಾಗುತ್ತಿರುವಾಗ ಪ್ರಾರ್ಥನೆಗೆ ಇದು ಸೂಕ್ತ ಕಾಲವೇ ಎಂದು ಕೇಳಿದಾಗ, “ಅದೆಲ್ಲಾ ಏನಿಲ್ಲ. ಪ್ರಾರ್ಥನೆ ನನ್ನ ಸಹಜ ಪದ್ಧತಿ. ಉಡುಪಿಯ ಕೃಷ್ಣಮಠದಿಂದ ಈ ಹಿಂದೆಯೂ ಆಹ್ವಾನ ಇತ್ತು. ನಮ್ಮ ಸರ್ಕಾರ ಬಂದ ಮೇಲೆಯೂ ಆಹ್ವಾನಿಸಿದ್ದರು. ಆದರೆ ಬರಲು ಸಾಧ್ಯವಾಗಿರಲಿಲ್ಲ. ಈಗ ಬಂದಿದ್ದೇನೆ” ಎಂದು ತಿಳಿಸಿದರು.

Related Articles

Back to top button