Karnataka NewsLatestPolitics

*ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿ-ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ಕಾಗಿ ಹೇಳಿದ್ದಾರೆ.

ವಿಧಾ‌ನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು, “ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್ ಎಸ್‌ ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ” ಎಂದರು.

ಆರ್ ಎಸ್ ಎಸ್ ನಿಂದ ಶಿಕ್ಷಣ ಸಂಸ್ಥೆಗಳ ಮೇಲೆ ಹಣ ಹೂಡಿಕೆ

Home add -Advt

“ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್ ಎಸ್‌‌ ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಆರ್‌ ಎಸ್ ಎಸ್ ಪ್ರತಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಎಲ್ಲಾ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ” ಎಂದರು.

“ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರ್ ಎಸ್ ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ” ಎಂದರು.

“ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು ಅದೇ ರೀತಿ ನಾವು ಮಾಡಿದ್ದೇವೆ” ಎಂದು ಹೇಳಿದರು.

ನಿಮ್ಮಲ್ಲೂ (ಮಾಧ್ಯಮ) ಒಬ್ಬೊಬ್ಬರದು ಒಂದೊಂದು ಗುಣ. ಹಿಡಿಯಲು ಬಂದರೆ ಜಾರಿಕೊಳ್ಳುವ ಗುಣವಿದೆ. ಒಳ್ಳೆಯ ಗುಣವೂ ಇದೆ. ಅವನ್ನು ನಾವು ಗಮನಿಸಬೇಕಲ್ಲವೇ? ಎಂದು ಡಿಸಿಎಂ ಅವರು ಉದಾಹರಣೆ ಕೊಟ್ಟರು.

ಬಿಜೆಪಿ ಠುಸ್ ಗಿರಾಕಿ

ಬಿಜೆಪಿಯವರು ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಬಿಜೆಪಿ ಒಂದು ಠುಸ್ ಗಿರಾಕಿ. ಅವರು ಮಾಡುತ್ತಿರುವುದು ರಾಜಕಾರಣ. ಹಿರಿಯ ಅಧಿಕಾರಿ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖಾ ತಂಡವು ಅಚ್ಚುಕಟ್ಟಾಗಿ ತಮ್ಮ ಕೆಲಸ ನಿರ್ವಹಿಸುತ್ತಿದೆ” ಎಂದರು.

ಆಧಾರವಿಟ್ಟುಕೊಂಡು ಆರೋಪ ಮಾಡಲಿ

“ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಆರೋಪ ಮಾಡಿದವನನ್ನು (ಮಹೇಶ್ ಶೆಟ್ಟಿ ತಿಮರೋಡಿ) ಬಂಧಿಸಲಾಗಿದೆ. ಆರೋಪ ಮಾಡಲು ಆತನ ಬಳಿ ದಾಖಲೆ ಏನಿದೆ? ನಮ್ಮ ನಡುವೆ ರಾಜಕೀಯವಾಗಿ ಸಾಕಷ್ಟು ಭಿನ್ನಾಭಿಪ್ರಾಯ ಹೊಂದಿರಬಹುದು ಆದರೆ ನಮ್ಮ ವಿರೋಧಿಗಳ ಬಗ್ಗೆ ಏನೇನೋ ಮಾತನಾಡುತ್ತಾನೆ ಎಂದು ನಾವು ಖುಷಿಪಡುವುದಲ್ಲ” ಎಂದು ತಿಳಿಸಿದರು.

“ಇಂದು ಅವರ ಬಗ್ಗೆ ಮಾತನಾಡಿದವರು, ನಾಳೆ ನಮ್ಮ ಬಗ್ಗೆಯೂ ಮಾತನಾಡುತ್ತಾರೆ. ಈ ಹಿಂದೆ ಮುಖ್ಯಮಂತ್ರಿಯವರು ಹಾಗೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಈ ರಾಜ್ಯದಲ್ಲಿ ಯಾರ ಸ್ವಾಭಿಮಾನಕ್ಕೂ ಧಕ್ಕೆ ಬರದಂತೆ ಕೆಲಸ ಮಾಡಬೇಕು. ರಾಜಕೀಯ ಮಾಡಲಿ, ರಾಜಕೀಯವಾಗಿ ಆರೋಪಗಳನ್ನು ಮಾಡಲಿ. ಆದರೆ ಆಧಾರಗಳನ್ನಿಟ್ಟುಕೊಂಡು ಆರೋಪ ಮಾಡಲಿ” ಎಂದರು.

ಧರ್ಮಸ್ಥಳದಲ್ಲಿ ಸಂಗ್ರಹವಾಗುವ ಹುಂಡಿ ಹಣದ ಲೆಕ್ಕ ಕೊಡಬೇಕು ಎನ್ನುವ ಸಮಾನ ಮನಸ್ಕ ವೇದಿಕೆಯ ಆಗ್ರಹದ ಬಗ್ಗೆ ಕೇಳಿದಾಗ, “ಇದನ್ನು ನೋಡಲು ಆದಾಯ ತೆರಿಗೆ ಇಲಾಖೆಯಿದೆ” ಎಂದರು.

I am a born Congressman, no question of joining hands with BJP-RSS: DCM DK Shivakumar
As a leader, I need to know who my friends and foes are
I have studied BJP, JDS and RSS history

Bengaluru, August 22: Stating that he was a born Congressman and would die a Congressman, Deputy Chief Minister DK Shivakumar today said that he stands by the party steadfastly at all times.

“My blood is Congress and my life is Congress. I am given the responsibility of leading the party in the state and I firmly stand with the party,” he said while speaking to reporters at Vidhana Soudha.

When asked about whispers about joining hands with BJP and RSS in view of him singing an RSS song in the Legislative Assembly, he said, “There is no question of me joining hands directly or indirectly. I keep researching about BJP and JDS as a political leader. Similarly, I have researched about RSS too.”

RSS investment in education
“I do my own research on political outfits. I am aware how RSS built its organisation in the state. RSS is investing significant amounts and is taking educational institutions into its fold in every district and every taluk. It is trying to reach students,” he said.

“I may have political differences, but as a political leader it is important to understand who are my friends and foes. I have learnt about RSS history for the same reason. Any organisation will have some positives and we need to observe and study them,” he added.

Related Articles

Back to top button