Karnataka NewsLatestPolitics

ಮಾಜಿ ಸಿಎಂ ಮನೆಗಳಿಗೆ ಸಿಎಂ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸಂಜೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಸಂಜೆ 6.30 ಕ್ಕೆ ಆರ್ ಟಿ ನಗರದಲ್ಲಿರುವ ಮಾಜಿ ಸಿಎಂ ವೀರಪ್ಪ ಮೊಯಿಲಿ ಅವರ ನಿವಾಸ, 7 ಕ್ಕೆ ಜಗದೀಶ್ ಶೆಟ್ಟರ್ ನಿವಾಸ , 7.30 ಕ್ಕೆ ಸಂಜಯನಗರದಲ್ಲಿರುವ ಸದಾನಂದ ಗೌಡರ ನಿವಾಸಕ್ಕೆ ಭೇಟಿ ನೀಡುವರು.

ಪ್ರಮಾಣ ವಚನ ಸ್ವೀಕರಿಸುವ ಮುನ್ನ ಎಚ್.ಡಿ.ದೇವೇಗೌಡ ಮತ್ತು ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದು ಇಲ್ಲಿ ಉಲ್ಲೇಖನೀಯ.

ನಿನ್ನೆ ನಿಧನರಾದ ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಎಂ ಎಸ್ ರಾಮಯ್ಯ ಆಸ್ಪತ್ರೆ ಬಳಿಯ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಅವರು ಇಂದು ರಾತ್ರಿ 8 ಗಂಟೆಗೆ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button