Kannada NewsKarnataka NewsLatest

*ಸಾಂಬಾರ್ ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಿಸಿಯೂಟ ಸಾಂಬಾರ್ ಪಾತ್ರೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಅಫಜಲಪುತ ತಾಲೂಕಿನ ಚಿಣಮಗಿ ಗ್ರಾಮದಲ್ಲಿ ನ.16ರಂದು ಶಾಲೆಯ ಬಿಸಿಯೂಟ ಸಾಂಬಾರ್ ಪಾತ್ರೆಗೆ 2ನೇ ತರಗತಿ ವಿದ್ಯಾರ್ಥಿನಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಾಳುವನ್ನು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾಳೆ.

Home add -Advt

ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಅಡುಗೆ ಮೇಲ್ವಿಚಾರಕ ಇಬ್ಬರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಕೈತೊಳೆದುಕೊಂಡಿದೆ. ವಿದ್ಯಾರ್ಥಿನಿಯ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

Related Articles

Back to top button