ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿಯಿರುವಾಗಲೇ ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಸಚಿವ ಆನಂದ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ಕಾರಿನಲ್ಲಿ ಆಗಮಿಸಿದ ಸಚಿವ ಆನಂದ್ ಸಿಂಗ್, ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಈ ಹಿಂದೆ ಖಾತೆ ಹಂಚಿಕೆ ವಿಚಾರದಲ್ಲಿಯೂ ತೀವ್ರ ಅಸಮಾಧಾನಗೊಂಡಿದ್ದ ಆನಂದ್ ಸಿಂಗ್ ಅವರಿಗೆ ಇದೀಗ ವಿಜಯನಗರ ಜಿಲ್ಲಾ ಉಸ್ತುವಾರಿ ಕೈತಪ್ಪಿತ್ತು. ಅವರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ನೀಡಲಾಗಿತ್ತು. ಉಸ್ತುವಾರಿ ವಿಚಾರವಾಗಿಯೂ ಅಸಮಾಧಾನ ವ್ಯಕ್ತಪಡಿಸಿದ್ದ ಆನಂದ್ ಸಿಂಗ್ ಇದೀಗ ಏಕಾಏಕಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಮಹತ್ವ ಪಡೆದಿದೆ.
ಬಿಜೆಪಿ ಕೆಲ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಇತ್ತೀಚೆಗಷ್ಟೇ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಚಿವ ಆನಂದ್ ಸಿಂಗ್ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ.
ನನ್ನ ವಿರುದ್ಧದ ಆರೋಪಗಳು ಸುಳ್ಳು; ಮಾನನಷ್ಟ ಕೇಸ್ ದಾಖಲಿಸುವುದಾಗಿ ಎಚ್ಚರಿಸಿದ ರವಿ ಡಿಚೆನ್ನಣ್ಣನವರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ