ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿಯಲ್ಲಿಯೂ ಭಾರಿ ಅಕ್ರಮ ನಡೆದಿದ್ದು, ಓರ್ವ ಮಹಿಳೆಗಾಗಿ ನಿಯಮವನ್ನೇ ಬದಲಿಸಿ ಆದೇಶ ಹೊರಡಿಸಿದ್ದಾರೆ ಎದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮಲ್ಲೇಶ್ವರಂನ ಒಬ್ಬ ಮಹಿಳೆಗೆ ಸಹಾಯ ಮಾಡಲೆಂದು ನಿಯಮಗಳನ್ನೇ ಬದಲಿಸಿ ಆದೇಶ ಹೊರಡಿಸಿದ್ದಾರೆ. ಪಿಎಸ್ ಐ, ಸಹಾಯಕ ಪ್ರಾಧ್ಯಾಪಕ ಹುದ್ದೆ ಮಾತ್ರವಲ್ಲ ಕೆಪಿಎಸ್ ಸಿ, ಪಿಡಬ್ಲ್ಯುಡಿ ಎಲ್ಲದರಲ್ಲಿಯೂ ಡೀಲ್ ನಡೆದಿದೆ ಎಂದು ಹೇಳಿದರು.
ಯಾವ ಹುದ್ದೆಗೆ ಎಷ್ಟು ಹಣ ಎಂದು ಬೋರ್ಡ್ ಹಾಕಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡುತ್ತೇನೆ. ಹಣ ಕೊಡದೇ ಬಿಜೆಪಿ ಸರ್ಕಾರದಲ್ಲಿ ಏನೂ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ ದೂರು ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ