ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳಿಂದ ಕಾಂಗ್ರೆಸ್ ಅರ್ಜಿ ಆಹ್ವಾನಿಸಿದ್ದು, ಶುಲ್ಕ ನಿಗದಿ ಮಾಡಿದೆ. ಇದನ್ನು ರಾಜ್ಯ ಬಿಜೆಪಿ ನಾಯಕರು ಲೇವಡಿ ಮಾಡಿದ್ದು, ಕೇಸರಿ ನಾಯಕರ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಿಂದ ಬಾಂಡ್ ತೆಗೆದುಕೊಂಡರೆ ಬಿಜೆಪಿ ವ್ಯಂಗ್ಯವಾಡುವ ಅಗತ್ಯವೇನು? ಬಿಜೆಪಿ ನಾಯಕರಿಗೆ ಸರ್ಕಾರ ಇದೆ. ಬಾಂಡ್ ವಸೂಲಿ ಮಾಡಿದ್ದಾರೆ. ನಮಗೆ ಬಾಂಡ್ ಕೊಡುವವರು ಯಾರೂ ಇಲ್ಲ ಎಂದು ಹೇಳಿದ್ದಾರೆ.
ಅದಕ್ಕಾಗಿ ನಾವು ನಮ್ಮ ಕಾರ್ಯಕರ್ತರ ಬಳಿ ಬಾಂಡ್ ತೆಗೆದುಕೊಳ್ಳುತ್ತಿದ್ದೇವೆ. ನಾನು ಬಾಂಡ್ ತೆಗೆದುಕೊಂಡರೆ ಬಿಜೆಪಿಯವರಿಗೆ ಏನ್ ನೋವು? ಅರ್ಜಿಗೆ 5 ಸಾವಿರ, 2 ಲಕ್ಷ ಡಿಡಿ, 1 ಲಕ್ಷ ಡಿಡಿ ಕೇಳಿದ್ದೇವೆ. ಈ ಬಗ್ಗೆ ನಮ್ಮ ಕಾರ್ಯಕರ್ತರು ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನ ವ್ಯಕ್ತಪಡಿಸಿದರೆ ಅಂತವರು ಯಾರೂ ಪಕ್ಷದಲ್ಲಿ ಇರಬೇಕಿಲ್ಲ ಎಂದು ಎಚ್ಚರಿಸಿದ್ದಾರೆ.
ನಾವು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ. ಇದು ನನ್ನ ವೈಯಕ್ತಿಕ ವಿಚಾರವಲ್ಲ, ಪಾರ್ಟಿಯ ವಿಚಾರ. ಮಾತನಾಡುವವರು ಯಾರೂ ಪಾರ್ಟಿ ಬಾವುಟ ಕಟ್ಟುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಬಿಜೆಪಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಚಂದ್ರಶೇಖರ್ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಮೂಡುತ್ತಿದೆ. ಸರ್ಕಾರ ತನಿಖೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಲಿ ಎಂದು ಹೇಳಿದರು.
ಜೀವ ಬೆದರಿಕೆ; ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಿಸಿದ ಪ್ರಮೋದ್ ಮುತಾಲಿಕ್
https://pragati.taskdun.com/latest/pramod-mutalikcomplaint-filethreat-call/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ