*ಸ್ಥಗಿತವಾಗಿರುವ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಪುನರಾರಂಭಕ್ಕೆ ಡಿಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಲಾಖೆಗಳಿಂದ ಅನುಮತಿ ಪಡೆದು ಸ್ಥಗಿತವಾಗಿರುವ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳನ್ನು ಪುನರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಸಂತನಗರದ ಅಯ್ಯಪ್ಪ ಸ್ವಾಮಿ ದೇವಾಸ್ಥಾನದ ಪಕ್ಕ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿಗಳು ನಂತರ ಜಯಮಹಲ್ ಪ್ಯಾಲೇಸ್ ರಸ್ತೆಯ ಅಗಲೀಕರಣ ಹಾಗೂ ಅಂಡರ್ ಗ್ರೌಂಡ್ ಕೇಬಲ್ ಅಳವಡಿಕೆ ಕಾಮಗಾರಿಯನ್ನು ಪರಿಶೀಲಿಸಿದರು. ಆದಷ್ಟು ಬೇಗ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. … Continue reading *ಸ್ಥಗಿತವಾಗಿರುವ ಬೆಂಗಳೂರು ಅಭಿವೃದ್ಧಿ ಕಾಮಗಾರಿಗಳ ಪುನರಾರಂಭಕ್ಕೆ ಡಿಸಿಎಂ ಸೂಚನೆ*