*ವಿಐಎಸ್ಎಲ್ ವಿಚಾರದಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್*

ಬಿಜೆಪಿ ನಾಯಕರು ಕೊಟ್ಟ ಮಾತಿನಂತೆ ಕೇಂದ್ರ ಸರ್ಕಾರದಿಂದ ವಿಐಎಸ್ಎಲ್ ಕಾರ್ಖಾನೆಗೆ ಬಂಡವಾಳ ತಂದು ಪುನರಾರಂಭ ಮಾಡಲು ವಿಫಲರಾಗಿದ್ದಾರೆ. ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದರೆ ಕೇವಲ ಅರ್ಧ ಗಂಟೆಯಲ್ಲಿ ತೀರ್ಮಾನ ಮಾಡಬಹುದು. ಆದರೆ ಈ ಬಗ್ಗೆ ಡಬಲ್ ಇಂಜಿನ್ ಸರ್ಕಾರ ವಿಫಲವಾಗಿದೆ. ಹೀಗಾಗಿ ಬಿಜೆಪಿಯವರು ಈ ಜನರ ಮುಂದೆ ಬಂದು ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹರಿಹಾಯ್ದಿದ್ದಾರೆ.