Kannada NewsKarnataka NewsLatestPolitics
*ದೆಹಲಿಯಿಂದ ಆಗಮಿಸಿ ಭೀಮಣ್ಣ ಖಂಡ್ರೆ ಅವರ ಅಂತಿಮ ಸಂಸ್ಕಾರದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿ*

ಮತ್ತೆ ದೆಹಲಿಗೆ ಮರಳಿದ ಡಿಸಿಎಂ
ಪ್ರಗತಿವಾಹಿನಿ ಸುದ್ದಿ: ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಸಚಿವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷರಾದ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೀದರ್ ನ ಭಾಲ್ಕಿಯಲ್ಲಿ ಶನಿವಾರ ಅಂತಿಮ ನಮನ ಸಲ್ಲಿಸಿ, ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡರು.

ದೆಹಲಿ ಪ್ರವಾಸದಲ್ಲಿದ್ದ ಡಿ ಕೆ ಶಿವಕುಮಾರ್ ಅವರು ಭೀಮಣ್ಣ ಖಂಡ್ರೆ ಅವರು ಲಿಂಗೈಕ್ಯರಾದ ಸುದ್ದಿ ತಿಳಿದು, ದೆಹಲಿಯಿಂದ ಹೈದರಾಬಾದ್ ಗೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸಿದರು.
ಭೀಮಣ್ಣ ಖಂಡ್ರೆ ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡ ನಂತರ ಮತ್ತೆ ಹೈದರಾಬಾದ್ ಮೂಲಕ ದೆಹಲಿಗೆ ಮರಳಿದರು.



