Kannada NewsKarnataka NewsLatestPolitics

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಬಿಗ್ ರಿಲೀಫ್ ಸಿಕ್ಕಿದೆ.

ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಈ ಮೂಲಕ ಸಿಬಿಐಗೆ ಹಿನ್ನೆಡೆಯಾಗಿದೆ.

Home add -Advt

ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ಪ್ರಶ್ನಿಸಿ ಸಿಬಿಐ ದಾಖಲೆಗಳ ಮೂಲಕ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಆಗಲ್ಲ ಎಂದು ಮೇಲ್ಮನವಿ ವಜಾಗೊಳಿಸಿದೆ.


Related Articles

Back to top button