
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ, ರಾಜ್ಯ ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಮುಂದಾಗಿದೆ.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹಾಗೂ ರಾಜಕೀಯ ಹೋರಾಟದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಆಗಸ್ಟ್ 2ರ ಭಾನುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸರ್ವಪಕ್ಷ ಸಭೆ (All-Party Meeting) ಕರೆದಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ CWRC ಆದೇಶ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ-CWMAಗೆ ಮೇಲ್ಮನವಿ ಸಲ್ಲಿಸಿದ್ದು, ದೆಹಲಿಯಲ್ಲಿ CWMA ಸಭೆ ಆರಂಭವಾಗಿದೆ. ಸಭೆಯ ತೀರ್ಮಾಅನ ವ್ಯತಿರಿಕ್ತವಾಗಿ ಬಂದಲ್ಲಿ ಕಾವೇರಿ ಕೊಳ್ಳದ ಭಾಗದಲ್ಲಿ ಮತ್ತೆ ಪ್ರತಿಭಟನೆ ಭುಗಿಲೇಳುವ ಸಾಧ್ಯತೆ ಇದೆ. ಸಭೆಯಲ್ಲಿ ತೀರ್ಮಾನ ವ್ಯತಿರುಕ್ತವಾಗಿ ಬಂದಲ್ಲಿ ಉಗ್ರ ಹೋರಾಟಕ್ಕೆ ರೈತರು ಹಾಗೂ ಕನ್ನಡಪರ ಸಂಘಟನೆಗಳು ಸಜ್ಜಾಗಿವೆ.


