*ನೇಹಾ ಹಿರೇಮಠ ತಂದೆಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಡಿಸಿಎಂ ಡಿ ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮೊನ್ನೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ ಅವರ ತಂದೆ ನಿರಂಜನ ಹಿರೇಮಠ ಅವರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದರು.
ಈ ದುರಂತದಿಂದ ನಮಗೂ ಆಘಾತವಾಗಿದೆ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಆಗಿರುವ ದುಃಖದಲ್ಲಿ ನಾವೂ ಭಾಗಿ. ಸರಕಾರ ನಿಮ್ಮ ಜತೆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಹೋದರ ಡಿ ಕೆ ಸುರೇಶ್ ಅವರ ಪರ ಆನೇಕಲ್ ನಲ್ಲಿ ಭಾನುವಾರ ಮಧ್ಯಾಹ್ನ ಪ್ರಚಾರ ರ್ಯಾಲಿ ಕೈಗೊಂಡಿದ್ದ ಸಂದರ್ಭದಲ್ಲಿ ಅವರು ನಿರಂಜನ ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡಿದರು.
ಪೂರ್ವನಿಗದಿತ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಿರತನಾಗಿದ್ದ ಕಾರಣ ಹುಬ್ಬಳ್ಳಿಗೆ ಖುದ್ದು ಬರಲು ಆಗಲಿಲ್ಲ. ಚುನಾವಣೆ ಮುಗಿದ ನಂತರ ಖಂಡಿತವಾಗಿಯೂ ಬರುತ್ತೇನೆ. ಮಗಳ ಅಗಲಿಕೆಯಿಂದ ನಿಮಗೆ ಆಗಿರುವ ನೋವು ಎಂತಹದು ಎಂಬುದು ನನಗೆ ಅರ್ಥವಾಗುತ್ತದೆ. ನೋವು ಭರಿಸುವ ಶಕ್ತಿಯನ್ನು ನಿಮಗೆ, ನಿಮ್ಮ ಕುಟುಂಬ ಸದಸ್ಯರಿಗೆ ಆ ಭಗವಂತ ನೀಡಲಿ ಎಂದು ಅವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ