Kannada NewsLatestNational
*ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ಮಹತ್ವದ ಸೂಚನೆ ನೀಡಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಕೇಸ್ ಗೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರ್ಜಿಯನ್ನು ಹೈಕೋರ್ಟ್ ನಲ್ಲಿಯೇ ಇತ್ಯರ್ಥಪಡಿಸಿಕೊಳ್ಳಲು ಸೂಚನೆ ನೀಡಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯಮೀರಿ ಆಸ್ತಿ ಗಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ನಲ್ಲಿಯೇ ಇತ್ಯರ್ಥಪಡಿಸಿಕೊಳ್ಳುವಂತೆ ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ