Kannada NewsKarnataka NewsLatest

*ಎರಡು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಶಿವಶಂಕರಪ್ಪ ಸಾಹುಕಾರ್*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಬಂಧನ ಭೀತಿಯಲ್ಲಿದ್ದು, ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆದರೆ ಸಾಹುಕಾರ್ ಈವರೆಗೂ ಸಿಐಡಿ ಕಚೇರಿಗೆ ಆಗಮಿಸಿಲ್ಲ ಎನ್ನಲಾಗಿದೆ.

Home add -Advt

ಈಗಾಗಲೇ ಶಿವಶಂಕರಪ್ಪ ಸಾಹುಕಾರ್ ಗೆ ಎರಡು ಬಾರಿ ಸಿಐಡಿ ನೋಟಿಸ್ ನೀಡಿದೆ. ಆದಾಗ್ಯೂ ವಿಚಾರಣೆಗೆ ಹಾಜರಾಗಿಲ್ಲ. ಬಂಧನ ಭೀತಿ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Related Articles

Back to top button