ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಫೆ.24ರವರೆಗೆ ತನಿಖೆ ನಡೆಸದಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಸಿಬಿಐ 2018ರಿಂದ ತನಿಖೆ ನಡೆಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಪತ್ನಿ, ಮಗಳಿಗೂ ನೋಟಿಸ್ ನೀಡಿತ್ತು. ತನಿಖೆಗೆ ತಡೆ ನೀಡುವಂತೆ ಕೋರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಫೆ.24ರೊಳಗಾಗಿ ತನಿಖಾಧಿಕಾರಿ ಈವರೆಗೆ ನಡೆಸಿದ ತನಿಖಾ ವರದಿಯನ್ನು ಸಲ್ಲಿಸಬೇಕು, ಅಲ್ಲಿಯವರೆಗೆ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸದಂತೆ ಮಧ್ಯಂತರ ತಡೆ ನೀಡಿದೆ ಎಂದು ತಿಳಿದುಬಂದಿದೆ.
*BDA ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*
https://pragati.taskdun.com/bda-officelokayukta-raidbangalore/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ