Kannada NewsKarnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ರಿಲೀಫ್ ನೀಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಹಿಂಪಡೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

Home add -Advt

ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ತನಿಖೆಯಿಂದ ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶವನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ನೇತೃತ್ವದ ಪೀಠ, ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹಾಗಾಗಿ ಸಿಬಿಐ ಪರ ವಕೀಲರ ಅಥವಾ ಯತ್ನಾಳ ಪರವಾದವನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕರದ ಕ್ರಮವನ್ನು ಎತ್ತಿಹಿಡಿದಿದೆ.

Related Articles

Back to top button