
ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ಮಾಡಿ ಮಳೆ ಪೀಡಿತ ಪ್ರದೇಶಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಯಲಹಂಕ ಭಾಗದ ಹಲವೆಡೆ ಭೇಟಿ ನೀಡಿದ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಡಿಸಿಎಂ, ಮಳೆಯಿಂದ ಹಾನಿಯಾಗಿಲ್ಲ. ಆದರೆ ಮುಂಜಾಗೃತಾಕ್ರಮವಾಗಿ ಕೆಲ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಖಾಸಗಿ ಲೇಔಟ್ ನವರು ಸರಿಯಾಗಿ ಪ್ಲಾನಿಂಗ್ ಮಾಡಿಲ್ಲ. ಇದರಿಂದಾಗಿ ಅಲ್ಲಿನ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದೆ. ಖಾಸಗಿ ಲೇಔಟ್ ನವರಿಗೆ ನೋಟಿಸ್ ನೀಡಲಾಗುವುದು. ಒಳಚರಂಡಿ ನೀರು, ಮಳೆ ನೀರು ಹೋಗಲು ಪ್ರತ್ಯೇಕ ವ್ಯವಸ್ಥೆ ಮಾಡಿಲ್ಲ. ಹಾಗಾಗಿ ಸಮಸ್ಯೆಯಾಗಿದೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಪ್ರಮುಖವಾಗಿ ರಾಜಕಾಲುವೆ ಎಲ್ಲೆಲ್ಲಿ ಬರುತ್ತದೆ ಎಂಬುದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ