Uncategorized

*ಸ್ಪಂದನಾ ವಿಜಯ್ ರಾಘವೇಂದ್ರ ನಿಧನ ಆಘಾತ ತಂದಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿ. ತೀರಾ ಇತ್ತೀಚಿಗಷ್ಟೇ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಅವರು ನನ್ನನ್ನು ಭೇಟಿ ಮಾಡಿದ್ದರು. ಈಗ ಅವರು ಇಲ್ಲ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ದು:ಖಿತರಾದರು.

ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿ ಪತಿ ವಿಜಯ ರಾಘವೇಂದ್ರ ಹಾಗೂ ಅವರ ಕುಟುಂಬ ಸದಸ್ಯರಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button