Kannada NewsKarnataka NewsLatestPolitics
*ಕಪ್ಪೆ ಚಿಪ್ಪು ಆರಿಸಲು ಹೋದಾಗ ದುರಂತ ಪ್ರಕರಣ: ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಆರಿಸಲು ಹೋಗಿದ್ದ 8 ಮಂದಿ ನೀರು ಪಾಲಾಗಿ ಮೃತಪಟ್ಟ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ ಎಂದು ಡಿಸಿಎಂ ಡಿ.ಕೆ.ಸಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಈ ದುರಂತದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಅವರು ಮಾಹಿತಿ ನೀಡಿದ್ದಾರೆ, ಅವರಿಗೆ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದೇನೆ. ಈಗಾಗಲೇ ಅಗತ್ಯ ರಕ್ಷಣಾ ಕಾರ್ಯಾಚರಣೆ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸರ್ಕಾರದಿಂದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.




