Latest

*ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ವಿಚಾರ; ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೊದಲು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೊದಲು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿ? ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ಬಳಿಕ ನಾವು ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಮೂಲಕ ಬಿಜೆಪಿ ಟಿಕೆಟ್ ನಿಂದ ವಂಚಿತರಾದ ನಾಯಕರನ್ನು ಕಾಂಗ್ರೆಸ್ ಸೆಳೆಯುವ ಸಾಧ್ಯತೆ ದಟ್ಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನೋಡಿಕೊಂಡು ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡುವ ಕಾದುನೋಡುವ ತಂತ್ರ ಅನುಸರಿಸಿದೆ.

https://pragati.taskdun.com/prime-minister-modibandipur-national-parksafari/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button