Latest

ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ನಡೆದಿದೆ. ಇ.ಡಿ ತನಿಖೆ ಬೆನ್ನಲ್ಲೇ ಇದೀಗ ಸಿಬಿಐ ಕಂಟಕ ಆರಂಭವಾಗಿದೆ.

ಬೆಂಗಳೂರಿನ ಸದಾಶಿವ ನಗರದ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಬೆಂಗಳೂರಿನ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

Home add -Advt

ಬೆಳಿಗ್ಗೆ 6 ಗಂಟೆಯಿಂದಲೇ ಸಿಬಿಐ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಸದಾಶಿವನಗರ, ಕನಕಪುರ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇ.ಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರ ತನಿಖೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಈಗ ಸಿಬಿಐ ದಾಳಿ ನಡೆದಿರುವುದು ಬಂಡೆಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಇದೇ ವೇಳೆ ಸಂಸದ ಡಿ.ಕೆ ಸುರೇಶ್ ಅವರ ನಿವಾಸದ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 

Related Articles

Back to top button