
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಮುಗಿದ ಬೆನ್ನಲೇ ರಾಜಕೀಯ ನಾಯಕರು ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ವಕ್ಷೇತ್ರದಲ್ಲಿ ಬೆಳಿಗ್ಗೆ ಹೋಟೆಲ್ ನಲ್ಲಿ ಉಪಹಾರ ಸೇವಿಸಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದ್ದಾರೆ.
ಚುನಾವಣಾ ಫಲಿತಾಂಶಕ್ಕೆ ಇನ್ನೆರಡು ದಿನ ಬಾಕಿಯಿದ್ದು, ಮತದಾನ ಮುಗಿಯುತ್ತಿದ್ದಂತೆ ನಾಯಕರು ರಿಲ್ಯಾಕ್ಸ್ ಆಗಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದಲ್ಲಿ ಕಾರ್ಯಕರ್ತರೊಂದಿಗೆ ಹೋಟೆಲ್ ನಲ್ಲಿ ಇಡ್ಲಿ, ದೋಸೆ ಸವಿದರು.

ಬಳಿಕ ಕೋಡಿಹಳ್ಳಿ ನಿವಾಸಕ್ಕೆ ತೆರಳಿ ತಾಯಿಯನ್ನು ಭೇಟಿಯಾಗಿ ಆಶಿರ್ವಾದ ಪಡೆದು ವಾಪಸ್ ಆದರು.