
ಎಐಸಿಸಿ ಮಹತ್ವದ ಸಭೆ
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಎಐಸಿಸಿ ನಡೆಸಲಿರುವ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನವದೆಹಲಿಯ ಇಂದಿರಾ ಭವನದಲ್ಲಿ ನಾಳೆ ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆ ಕುರಿತ ಎಐಸಿಸಿ ನಡೆಸಲಿರುವ ಮಹತ್ವದ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ.
ನಾಳೆ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಾಳೆ ಸಂಜೆ ಅಥವಾ ನಾಡಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಮತ್ತೆ ಚರ್ಚೆಗಳು ಆರಂಭವಾಗಿರುವ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಕುತೂಹಲ ಮೂಡಿಸಿದೆ.


