Karnataka NewsLatestNationalPolitics

*ಸಿಎಂ ಡಿ.ಕೆ.ಶಿವಕುಮಾರ್ ಗೆ ದೆಹಲಿಯಲ್ಲಿ ಭಾರಿ ಭದ್ರತೆ*

ಪ್ರಗತಿವಾಹಿನಿ ಸುದ್ದಿ: ಸಂಸದರ ಸಭೆ, ಸಂಪುಟ ವಿಸ್ತರಣೆ ವಿಚಾರವಾಗಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಭದ್ರತೆ ಒದಗಿಸಲಾಗಿದೆ.

ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ದೆಹಲಿಯಲ್ಲಿ ಇಷ್ಟೊಂದು ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಿರುವುದು ಇದೇ ಮೊದಲು ಎನ್ನಲಾಗಿದೆ. ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಪೊಲೀಸರ ವಿಶೇಷ ತಂಡವು ಸಿಎಂ ಡಿ.ಕೆ.ಶಿವಕುಮಾರ್ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಎಸ್‌ಪಿ, ಇನ್ಸ್‌ಪೆಕ್ಟರ್‌ ಸೇರಿದಂತೆ ಹಲವು ಹಂತದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಸಿಎಂ ಡಿ.ಕೆ.ಶಿವಕುಮಾರ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಭದ್ರತೆಯಲ್ಲಿಯೇ ಸಿಎಂ ಓಡಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button