Karnataka NewsLatestPolitics

*ಈ ಸಂಕಷ್ಟ ಸಮಯದಲ್ಲಾದರೂ ಕೇಂದ್ರ ಸರಕಾರ ನೆರವು ನೀಡುವ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಾದರೂ ಕೇಂದ್ರ ನೆರವು ನೀಡುವ ನಿರೀಕ್ಷೆ ಇದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ ಸೈನಿಕ ಸ್ಮಾರಕದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು.

ಸೋಮವಾರ ದೆಹಲಿಯಲ್ಲಿ ಸಂಸದರ ಜೊತೆಗಿನ ಸಭೆ ಬಗ್ಗೆ ಕೇಳಿದಾಗ, “ರಾಜ್ಯದಲ್ಲಿನ ಬರ ಪರಿಸ್ಥಿತಿ, ಬಾಕಿ ಇರುವ ವಿವಿಧ ಯೋಜನೆಗಳು ಹಾಗೂ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಧ್ವನಿ ಎತ್ತುವ ಬಗ್ಗೆ ಚರ್ಚೆ ಮಾಡಲು ನಾಳೆ ಸಂಜೆ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರೂ ಭಾಗಿಯಾಗಲಿದ್ದಾರೆ. ಬರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಿ ಕೇಂದ್ರ ಸರ್ಕಾರ ನೆರವು ನೀಡುವ ನಿರೀಕ್ಷೆ ಇದೆ. ಆಗಸ್ಟ್ 13 ರಿಂದ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು.

Related Articles

Back to top button