Latest

*ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ದಿಢೀರ್ ರದ್ದು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ದೆಹಲಿ ಪ್ರವಾಸ ದಿಢೀರ್ ರದ್ದಾಗಿದೆ ಎಂದು ತಿಳಿದುಬಂದಿದೆ.

ಡಿ.ಕೆ.ಶಿವಕುಮಾರ್ ಇಂದು ಸಂಜೆ 7:30ಕ್ಕೆ ದೆಹಲಿಗೆ ತೆರಳಬೇಕಾಗಿತ್ತು. ಇದಕ್ಕಾಗಿ ಏರ್ ಇಂಡಿಯಾ ವಿಮಾನ ಟಿಕೆಟ್ ಕೂಡ ಬುಕ್ ಆಗಿತ್ತು. ಆದರೆ ಕೊನೇ ಕ್ಷಣದಲ್ಲಿ ತಮ್ಮ ದೆಹಲಿ ಭೇಟಿ ಕಾರ್ಯಕ್ರಮ ರದ್ದು ಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆದಿದ್ದು, ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಸರಣಿ ಸಭೆಗಳು ನಡೆಯುತ್ತಿದ್ದು. ಡಿ.ಕೆ.ಶಿವಕುಮಾರ್ ಇಂದು ಸಂಜೆ ದೆಹಲಿಗೆ ತೆರಳಬೇಕಿತ್ತು. ಆದರೆ ಕೊನೇ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.

https://pragati.taskdun.com/karnataka-vidhanasabha-electionnew-cmoathmay-17thmay18/


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button