ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನನಗೆ ನಶೆ ಪಶೆ ಯಾವೂದೂ ಗೊತ್ತಿಲ್ಲ. ಕೇವಲ ಸೆಲೆಬ್ರಿಟಿಗಳನ್ನು ಮಾತ್ರ ತನಿಖೆ ಮಾಡುತ್ತಿರುವುದನ್ನು ನೋಡಿ ಅಚ್ಚರಿಯಾಗುತ್ತಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್. ಡ್ರಗ್ಸ್ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತೆಗೆದುಕೊಂಡಿಲ್ವಾ? ಕೇವಲ ಮನೋರಂಜನಾ ಇಂಡಸ್ಟ್ರಿಯಲ್ಲಿರುವವರು ಮಾತ್ರ ಇದರಲ್ಲಿ ಇರುವುದನ್ನು ನೋಡಿ ಆಶ್ಚರ್ಯವಾಗುತ್ತಿದೆ ಎಂದರು.
ಇನ್ನು ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂಬ ಸಚಿವ ಆನಂದ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಆಡಳಿತ ಪಕ್ಷದವರೇ ಹೇಳ್ತಾರೆ ಸರ್ಕಾರ ಬೀಳಬಹುದು ಎಂದು, ಆದರೆ ಸಿಎಂ ಯಡಿಯೂರಪ್ಪ ಹೇಳುತ್ತಾರೆ 150 ಜನ ಇದ್ದೀವಿ, ಇನ್ನೂ 10 ವರ್ಷ ನಾವೇ ಇರ್ತಿವಿ ಎಂದು. ಇದಕ್ಕೆಲ್ಲ ನಾನು ರಿಯಾಕ್ಟ್ ಮಾಡುವುದಿಲ್ಲ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ