ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಡಿಯವರು ಸಮನ್ಸ್ ನೀಡಿದ್ದಾರೆ. ಹಾಗಾಗಿ ವಿಚಾರಣೆಗೆ ಹಾಜರಾಗಿದ್ದೇವೆ. ಯಾವ ವಿಚಾರದ ಬಗ್ಗೆ ಕೇಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ,ಕೆ.ಸುರೇಶ್ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನನಗೆ ಹಾಗೂ ನನ್ನ ತಮ್ಮನಿಗೆ ಇಡಿಯವರು ಸಮನ್ಸ್ ನೀಡಿದ್ದಾರೆ. ಕಾಲಾವಕಾಶ ಕೇಳಿದರೂ ಕೊಟ್ಟಿಲ್ಲ. ಕಾನೂನಿಗೆ ಗೌರವ ಕೊಟ್ಟು ಇಂದು ವಿಚಾರಗೆ ಹಾಜರಾಗಿದ್ದೇವೆ. ಬೇರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿದ್ದಾರೆ. ಯಾವ ವಿಚಾರ ಕೇಳ್ತಾರೆ ಎಂಬುದು ಗೊತ್ತಿಲ್ಲ ಎಂದರು.
ಸೋಲಾರ್ ಹಗರಣದ ತನಿಖೆಯನ್ನೂ ಮಾಡಲಿ. ಸಿಬಿಐ ಸೇರಿ ಯಾವ ಸಂಸ್ಥೆಯಿಂದಾದರೂ ತನಿಖೆ ನಡೆಸಲಿ. ಅಕ್ರಮ ನಡೆಸಿದ್ದರೆ, ತನಿಖೆಯಾಗಲಿ. ನಾನು ತಪ್ಪು ಮಾಡಿದರೆ ನನಗೆ ಗಲ್ಲಿಗೇರಿಸಲಿ ಎಂದು ಹೇಳಿದರು.
ಮಾಜಿ ಸಚಿವ ಜಬ್ಬರ್ ಖಾನ್ ಹೊನ್ನಳ್ಳಿ ಇನ್ನಿಲ್ಲ
https://pragati.taskdun.com/politics/jabbar-khan-honnallino-morehubli/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ