ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಭರತ್ ಜೋಡೋ ಯಾತ್ರೆ ವೇಳೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯವು (ಇ ಡಿ) ಮತ್ತೆ ಸಮನ್ಸ್ ಜಾರಿ ಮಾಡಿದೆ.
ಅಕ್ಟೋಬರ್ 7 ರಂದು ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಇಡಿ ಅಧಿಕಾರಿಗಳು ಮತ್ತೆ ನೋಟೀಸ್ ಜಾರಿ ಮಾಡಿದ್ದು, ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಹಾಗಾಗಿ ನಾವು ಇಂದು ಸಂಜೆಯೇ ದೆಹಲಿಗೆ ತೆರಳುತ್ತಿದ್ದು, ನಾಳೆ ವಿಚಾರಣೆಗೆ ಹಾಜರಾಗಲಿದ್ದೇವೆ ಎಂದು ತಿಳಿಸಿದ್ದಾರೆ.
ಈ ಮೊದಲು ದಿನಾಂಕ 23-09-2022 ರಂದು ಇಬ್ಬರಿಗೂ ಅಕ್ಟೋಬರ್ 7 ರಂದು ವಿಚಾರಣೆಗೆ ಬರುವಂತೆ ಇ ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಶಿವಕುಮಾರ್ ಹಾಗೂ ಸುರೇಶ್ ಅವರು ಪತ್ರ ಬರೆದು ಕೋರಿದ್ದರು.
ಆದರೆ ಅದಕ್ಕೆ ನಿರಾಕರಿಸಿರುವ ಇ ಡಿ 7-10-2022 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ದಿನಾಂಕ 05-10-2022 ರಂದು ಮತ್ತೊಂದು ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ನಾಳೆ ವಿಚಾರಣೆಗೆ ಡಿ.ಕೆ.ಸಹೋದರರು ಹಾಜರಾಗಲಿದ್ದಾರೆ.
ಭಾರತ ಜೋಡೋ ಯಾತ್ರೆ; ತಾಯಿಯ ಶೂ ಲೇಸ್ ಕಟ್ಟಿ ಕೊಟ್ಟ ರಾಹುಲ್ ಗಾಂಧಿ
https://pragati.taskdun.com/politics/bharath-jodo-yatrerahul-gandhisonia-gandhi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ