
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. 2019ರ ದಾಳಿ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ದೆಹಲಿ ವಿಶೇಷ ಕೋರ್ಟ್ ಗೆ ಇಡಿ ಅಧಿಕಾರಿಗಳು ಹೊಸದಾಗಿ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದು, ಚುನಾವಣೆ ಸಂದರ್ಭದಲ್ಲಿ ಡಿ,ಕೆ.ಶಿವಕುಮಾರ್ ಗೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ 2019ರಲ್ಲಿ ಇಡಿ ಅಧಿಕಾರಿಗಳು ದೆಹಲಿಯ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣ ಸಂಬಂಧ ಇದೀಗ ಎರಡುವರೆ ವರ್ಷದ ಬಳಿಕ ಹೊಸದಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
ಬೆಳಗಾವಿ: ಚೆನ್ನಮ್ಮ ವೃತ್ತದಲ್ಲಿ ಸರಣಿ ಅಪಘಾತ