Election NewsKarnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮತದಾರರಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Home add -Advt

ಆರ್.ಆರ್. ನಗರ ಅಪಾರ್ಟ್ ಮೆಂಟ್ ವೊಂದರಲ್ಲಿ ಮತಯಾಚನೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿತ್ತು. ಇದೀಗ ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮತಯಾಚನೆ ವೇಳೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಲಂಚ ಹಾಗೂ ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button