Kannada NewsKarnataka NewsLatest
*ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮೊದಲ ಬಾರಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: 80ನೇ ಸ್ವಾತಂತ್ರ್ಯ ದಿನಾಚರಣೆಯ ಸಡಗರ-ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಮೊದಲ ಸ್ವಾತಂತ್ರ್ಯ ದಿನಾಚರಣೆ ಇದಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮೊದಲ ಬಾರಿ ಧ್ವಜಾರೋಹಣ ನೆರವರೇಸಿದರು. ಬಳಿಕ ತೆರದ ವಾಅಹನದಲ್ಲಿ ತೆರಳಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಅವರು ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ 80ನೇ ಸ್ವಾತಂತ್ರ್ಯ ದಿನದ ಹಾರ್ದಿಕ ಶುಭಾಶಯ ಕೋರಿದರು. ದೇಶದ ಐಕ್ಯತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಎಲ್ಲಾ ಮಹನೀಯರಿಗೆ ಗೌರವ ನಮನ ಸಲ್ಲಿಸಿದರು.



