ಪ್ರಗತಿವಾಹಿನಿ ಸುದ್ದಿ; ಹೊಸ ವರ್ಷ ಬರಮಾಡಿಕೊಳ್ಳಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಇದೆ. ನ್ಯೂ ಇಯರ್ ಸೆಲೆಬ್ರೇಷನ್ ಗೆ ರಾಜ್ಯ ರಾಜಧಾನಿ ಬೆಂಗಳೂರು ಸಡಗರ-ಸಂಭ್ರಮದಿಂದ ಕಾಯುತ್ತಿದೆ. ರಾಜಕೀಯ ನಾಯಕರು, ಗಣ್ಯರು ಕುಟುಂಬದ ಜೊತೆ ಸೇರಿ ಹೊಸ ವರ್ಷಾಚರಣೆಗೆ ಸಜ್ಜಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹೊಸವರ್ಷಾಚರಣೆಗಾಗಿ ಕುಟುಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಇಂದಿನಿಂದ ನಾಲ್ಕು ದಿನಗಳ ಕಾಲ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸ ಕೈಗೊಂಡಿದ್ದು, ಮುಂಜಾನೆಯೇ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಕೆನಡಾ, ಟರ್ಕಿ ಪ್ರವಾಸ ಕೈಗೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಫ್ಯಾಮಿಲಿ ಜೊತೆ ಈಬಾರಿ ವಿದೇಶದಲ್ಲಿ ಹೊಸ ವರ್ಷಾಚರಣೆ ಮಾಡಲಿದ್ದಾರೆ. ವಿದೇಶ ಪ್ರವಾಸದಿಂದ ಜನವರಿ 4 ರಂದು ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ